19.4 C
Munich
Home News ಉಡುಪಿ ಶ್ರೀಕೃಷ್ಣ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

ಉಡುಪಿ ಶ್ರೀಕೃಷ್ಣ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀಕೃಷ್ಣ ಮಠ, ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀಕೃಷ್ಣ ಮಠ, ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಉಡುಪಿ, ಜೂನ್ 13(www.kannadapost.com): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಶ್ರೀಕೃಷ್ಣ ಮಠ, ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಡಗೋಲು ಕೃಷ್ಣನ ದರ್ಶನ ಪಡೆದ ಸಚಿವೆ, ಬಳಿಕ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರಿಂದ ಗೌರವಾರ್ಪಣೆ ಹಾಗೂ ಆಶೀರ್ವಾದ ಸ್ವೀಕರಿಸಿದರು.

ನಂತರ ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್, ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರೊಂದಿಗೆ ಅವರು ಮಾತುಕತೆ ನಡೆಸಿದರು.

                                                                 ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವ ಮುನ್ನ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರ ಆಧ್ಯಾತ್ಮಿಕ ಪಯಣ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

error: Content is protected !!