Hassan|ಹಾಸನ: ಆಲೂರು ತಾಲ್ಲೂಕಿನ ಪಾಳ್ಯ ಬಳಿ ಹಾಸನದ ಜನಪ್ರಿಯ ಆಸ್ಪತ್ರೆ ಸಿಇಒ, ವೈದ್ಯ ಡಾ.ಅಬ್ದುಲ್ ಬಷೀರ್ ಅವರ ಪುತ್ರ, ವೈದ್ಯ ಡಾ.ಶಾರೂಖ್ ಅಬ್ದುಲ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವರು KA-13 MB 7009 ನೋಂದಣಿ ಸಂಖ್ಯೆಯ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತಕ್ಕೆ ಕಾರಣವೇನು?
ಅತಿ ವೇಗದ ಚಾಲನೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು, ಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬರೋಬ್ಬರಿ ಮೂರು ಬಾರಿ ಪಲ್ಟಿಯಾಗಿದೆ. ಪರಿಣಾಮ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ವೈದ್ಯ ಡಾ. ಶಾರುಖ್ ಅಬ್ದುಲ್ಲಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾರಿ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.











