21.7 C
Munich
Home News ಮೈಸೂರಿನಲ್ಲಿ ಘೋರ ದುರಂತ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮೈಸೂರಿನಲ್ಲಿ ಘೋರ ದುರಂತ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮೈಸೂರು, ಜು.21 (www.kannadapost.com):: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯಲ್ಲಿ ಮನಕಲಕುವ ಕುಟುಂಬ ದುರಂತವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಹರೀಶ್ (42) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹರೀಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿರುವ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ಹಾಗೂ ಈ ಕೃತ್ಯಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ಘಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹುಣಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸೂಚನೆ: ಈ ಘಟನೆಯ ಹಿಂದಿನ ಕಾರಣಗಳ ಕುರಿತು ಅಧಿಕೃತ ತನಿಖೆ ಇನ್ನೂ ಮುಂದುವರಿದಿದೆ. ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಈ ವರದಿ ಪ್ರಕಟಿಸಲಾಗಿದೆ.

error: Content is protected !!