23.3 C
Munich
Home News ಆಲೂರು: 2 ವರ್ಷದ ಮಗುವನ್ನು ಕೊಂದು ತಾಯಿ ಆತ್ಮಹ*ತ್ಯೆ; ಹೃದಯವಿದ್ರಾವಕ ಘಟನೆ

ಆಲೂರು: 2 ವರ್ಷದ ಮಗುವನ್ನು ಕೊಂದು ತಾಯಿ ಆತ್ಮಹ*ತ್ಯೆ; ಹೃದಯವಿದ್ರಾವಕ ಘಟನೆ

ಆಲೂರು: 2 ವರ್ಷದ ಮಗುವನ್ನು 6ಕೊಂದು ತಾಯಿಯೂ ಆತ್ಮಹ*ತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಹೌಸಿಂಗ್ ಬೋರ್ಡ್‌ನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಅನುಶ್ರೀ (27) ಎಂಬ ಮಹಿಳೆ ತನ್ನ ಮಗ ಆರ್ಯನ್ (2)ನನ್ನು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಬೆಂಗಳೂರಿನಿಂದ ಆಲೂರಿಗೆ ಬಂದಿದ್ದ ಕುಟುಂಬ

ಆಲೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಅನುಶ್ರೀ ಅವರು ಶ್ರೀನಿವಾಸ್ ಎಂಬುವರನ್ನು ಸುಮಾರು ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿ ತಮ್ಮ ಮಗುವಿನೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಎರಡು ತಿಂಗಳ ಹಿಂದೆ ಬೆಂಗಳೂರಿನಿಂದ ಆಲೂರಿಗೆ ಬಂದು ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಆತ್ಮಹ*ತ್ಯೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚುತ್ತಿದ್ದಾರೆ.

ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

error: Content is protected !!