ಹಾಸನ (kannadapost.com): ಹಿರಿಯ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ಭಾಷಣ ಮಾಡಿದ ನಂತರ, ಅದೇ ವೇದಿಕೆಯನ್ನು ಶುದ್ಧೀಕರಣ ಮಾಡಿರುವುದನ್ನು ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಡಿ.ಸಿ ಸಣ್ಣಸ್ವಾಮಿ ಖಂಡಿಸಿದ್ದಾರೆ.
ಕಾAಗ್ರೆಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಲ್ಲಾ ನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅವರು ಅಲ್ಲಿಂದ ಮರಳಿದ ಬಳಿಕ ಅದೇ ಮೈದಾನದಲ್ಲಿ ಶುದ್ಧೀಕರಣ ಕಾರ್ಯ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಅಮಾನವೀಯ ಕೃತ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಅವಮಾನ ಮಾತ್ರವಲ್ಲ. ದೇಶದ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ಮಾಡಿದ ಅವಮಾನವಾಗಿದೆ.
ಇದು ಪ್ರತೀಕಾರ ಮತ್ತು ದ್ವೇಷದ ರಾಜಕಾರಣಕ್ಕೆ ಸಾಕ್ಷಿಯಾಗಿದೆ, ಇಂತಹ ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಇಂತಹ ಅಸ್ಪಶ್ಯತೆ ಆಚರಣೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಆದರೆ ಬಿಜೆಪಿಯ ದಲಿತ ಮುಖಂಡರಾದ ಎನ್.ಮಹೇಶ್, ಛಲವಾದಿ ನಾರಾಯಣಸ್ವಾಮಿ, ಹಾಸನ ಜಿಲ್ಲೆಯ ಶಾಸಕ ಸಿಮೆಂಟ್ ಮಂಜು, ಜೆಡಿಎಸ್‌ನ ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ ಸೇರಿದಂತೆ ವಿವಿಧ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಸಚಿವರು ಮಾಜಿ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ವಿಚಾರವಾಗಿ ದ್ವನಿ ಎತ್ತದೆ ಇರುವುದು ದುರ್ದೈವ. ದಲಿತ ಸಮುದಾಯದಿಂದ ಜನಪ್ರತಿನಿಧಿಗಲಾಗಿರುವ ಇವರು, ಈ ವಿಚಾರವಾಗಿ ಮೌನ ವಹಿಸಿರುವುದು ಏಕೆ ಎಂದು ಸಣ್ಣಸ್ವಾಮಿ ಪ್ರಶ್ನಿಸಿದ್ದಾರೆ.












