-0.1 C
Munich
Home News ಹಾಸನ: ಎನ್. ಪ್ರದೀಪ್ ಕುಮಾರ್ ಅವರಿಗೆ ರಾಜ್ಯಮಟ್ಟದ ‘ಸಾಂಸ್ಕೃತಿಕ ಸೇವಾರತ್ನ ಪ್ರಶಸ್ತಿ’ ಪ್ರದಾನ

ಹಾಸನ: ಎನ್. ಪ್ರದೀಪ್ ಕುಮಾರ್ ಅವರಿಗೆ ರಾಜ್ಯಮಟ್ಟದ ‘ಸಾಂಸ್ಕೃತಿಕ ಸೇವಾರತ್ನ ಪ್ರಶಸ್ತಿ’ ಪ್ರದಾನ

ಹಾಸನ,ನ,13,2026 (kannadapost.com): ಹೊಳೆನರಸೀಪುರ ತಾಲ್ಲೂಕು ಖಜಾನೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಎನ್. ಪ್ರದೀಪ್ ಕುಮಾರ್ (ಟ್ರೆಜೆರಿ) ಅವರ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಂಘಟನಾತ್ಮಕ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ‘ಸಾಂಸ್ಕೃತಿಕ ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಮಾಣಿಕ್ಯ ಪ್ರಕಾಶನ (ರಿ.), ಹಾಸನ ವತಿಯಿಂದ ಪ್ರದೀಪ್ ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವೈ.ಎಸ್. ತಮ್ಮಣ್ಣಶೆಟ್ಟಿ, ಆಲೂರು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ವರದರಾಜು, ತಾಲ್ಲೂಕು ಗೌರವಾಧ್ಯಕ್ಷ ಬಿ.ಆರ್. ಧರ್ಮ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಉದಯ ಟಿ., ಬ್ಯಾಂಕ್ ಗಿರೀಶ್, ಆಲೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ.ಆರ್. ವೇಣುಗೋಪಾಲ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಹಾಸನ ತಾಲ್ಲೂಕು ಉಪಾಧ್ಯಕ್ಷ ವಿ. ಮೋಹನ್, ಪತ್ರಕರ್ತ ವಿಜಯಕುಮಾರ್, ಎಲ್.ಐ.ಸಿ. ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!