10.1 C
Munich
Home News Politics ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ವಿಚಾರಣೆಗೆ ಹಾಜರಾದ ಜಿ.ದೇವರಾಜೇಗೌಡ ಹೇಳಿದ್ದೇನು?

ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ವಿಚಾರಣೆಗೆ ಹಾಜರಾದ ಜಿ.ದೇವರಾಜೇಗೌಡ ಹೇಳಿದ್ದೇನು?

ಕಿರಾತಕರನ್ನು ಬಂಧಿಸಲು ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದೇನೆ.

ಹಾಸನ: ಸಂಸದ ಪ್ರಜ್ವಲ್‌ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಗುರುವಾರ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿರುವ ವಕೀಲ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಹೇಳಿಕೆ ದಾಖಲಿಸಿದ್ದಾರೆ.

ದೇವರಾಜೇಗೌಡರಿಗೆ ಮಾತ್ರ ಪೆನ್‌ಡ್ರೈವ್ ಕೊಟ್ಟಿದ್ದೆ ಎಂದಿದ್ದ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿಕೆ ಹಾಗೂ ತನ್ನ ಬಳಿ ಪ್ರಜ್ವಲ್ ಅಶ್ಲೀಲ ವಿಡಿಯೋಗಳಿವೆ ಎಂದು ದೇವರಾಜೇಗೌಡ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿತ್ತು.

ನಿನ್ನೆ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿರುವ ಬಗ್ಗೆ ದೇವರಾಜೇಗೌಡ ವಾಟ್ಸಪ್ ಸ್ಟೇಟಸ್ ನಲ್ಲಿ ಹೇಳಿಕೊಂಡಿದ್ದಾರೆ.

ಸಂಸದ ಪ್ರಜ್ವಲ್‌ರೇವಣ್ಣ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಬಿಡುಗಡೆ ವಿಷಯ ಸಂಬಂಧಪಟ್ಟಂತೆ ಎಸ್‌ಐಟಿ ನೋಟೀಸ್ ನೀಡಿತ್ತು. ನಾನು ಎಸ್‌ಐಟಿ ತಂಡದ ಮುಂದೆ ಹಾಜರಾಗಿ ಈ ಪ್ರಕರಣಕ್ಕೆ ಪೂರಕವಾದ ಸಾಕ್ಷಿ, ಹೇಳಿಕೆಯನ್ನು ನೀಡಿದ್ದೇನೆ. ಈ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು.

ಹಾಗೆಯೇ ಪೆನ್‌ಡ್ರೈವ್‌ನಲ್ಲಿರುವ ಅಶ್ಲೀಲ ವಿಡಿಯೋಗಳನ್ನು ರಾಜ್ಯಾದ್ಯಂತ ಹಂಚಿರುವ ಕಡುನೀಚರ ಬಗ್ಗೆ ಹಲವು ಸುಳಿವುಗಳನ್ನು ನೀಡಿದ್ದೇನೆ. ಸದರಿ ಕಿರಾತಕರನ್ನು ಬಂಧಿಸಲು ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದೇನೆ.

ಈ ಪ್ರಕರಣದಲ್ಲಿ ರಾಜ್ಯದ ಹೆಣ್ಣುಮಕ್ಕಳ ಘಟನೆ ಹಾಗೂ ಅವರ ಶೀಲದ ವಿಷಯದಲ್ಲಿ ಚೆಲ್ಲಾಟವಾಡಿರುವ ರಾಜಕಾರಣಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದೇನೆ ಎಂದು ಬರೆದುಕೊಂಡಿದ್ದೇನೆ.

error: Content is protected !!