2.1 C
Munich
Home ರಾಜ್ಯ ಆಪರೇಷನ್ ಸಿಂದೂರ ಸಕ್ಸಸ್: ಮುಜರಾಯಿ ದೇವಾಲಯಗಳಲ್ಲಿ ಭಾರತೀಯ ಸೇನೆ ಹಾಗೂ ಸೈನಿಕರ ಹೆಸರಿನಲ್ಲಿ ವಿಶೇಷ ಪೂಜೆಗೆ...

ಆಪರೇಷನ್ ಸಿಂದೂರ ಸಕ್ಸಸ್: ಮುಜರಾಯಿ ದೇವಾಲಯಗಳಲ್ಲಿ ಭಾರತೀಯ ಸೇನೆ ಹಾಗೂ ಸೈನಿಕರ ಹೆಸರಿನಲ್ಲಿ ವಿಶೇಷ ಪೂಜೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ಆಪರೇಷನ್ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಹಾಗೂ ಸೈನಿಕರ ಹೆಸರಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಸಂಕಲ್ಪ ಪೂಜೆ ನಡೆಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಮುಜರಾಯಿ ಇಲಾಖೆ ಸುತ್ತೋಲೆ ಪ್ರತಿ

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಮೇ 7ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಯ ಕಾರ್ಯಾಚರಣೆಗೆ ಶುಭಾಶಯ ಸಲ್ಲಿಸಿದ್ದಾರೆ.

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆ ಸಲ್ಲಿಸುತ್ತಾ, ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಈ ಮೂಲಕ ಆದೇಶಿಸಿದೆ ಎಂದು ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಟೇಶ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

error: Content is protected !!