ಹಾಸನ, ಜೂನ್ 17, 2025: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಶೆಟ್ಟಿಕೊಪ್ಪಲು ಗ್ರಾಮದಲ್ಲಿ ಮನೆಗೆ ಎಳೆದಿದ್ದ ವಿದ್ಯುತ್ ತಂತಿ ತಗುಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ರೈತರು ವಿದ್ಯುತ್ ಶಾಕ್‌ಗೆ ಬಲಿಯಾಗಿದ್ದಾರೆ.
ಮೃತ ರೈತರನ್ನು ಚಗಚೆಗೆರೆ ಗ್ರಾಮದ ಬಾಳೆಗೌಡ (73) ಮತ್ತು ಕುಡುಕುಂದಿ ಗ್ರಾಮದ ಹೊಂಬೆಗೌಡ (55) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ತನಿಖೆ ಆರಂಭವಾಗಿದೆ.










