ಹಾಸನ, ಜೂನ್ 19: ಚನ್ನರಾಯಪಟ್ಟಣ ತಾಲೂಕಿನ ಕೋಡಿಹಳ್ಳಿ ಗ್ರಾಮ ಪಂಚಾಯಿತಿಯ PDO ಪುಟ್ಟಸ್ವಾಮಿ, ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಪೆಟ್ಟಿಗೆ ಅಂಗಡಿ ಇಟ್ಟುಕೊಳ್ಳಲು ವ್ಯಾಪಾರಿ ಸತೀಶ್ ಎಂಬವರಿಂದ ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಎದುರಿಸಿರುವ ಪುಟ್ಟಸ್ವಾಮಿ, ಚನ್ನರಾಯಪಟ್ಟಣದ ಹೋಟೆಲ್‌ವೊಂದರಲ್ಲಿ ₹3,000 ಸ್ವೀಕರಿಸುತ್ತಿದ್ದಾಗ ಬಂಧಿತರಾಗಿದ್ದಾರೆ.
ಸತೀಶ್ ಎಂಬವರು ಈಗಾಗಲೇ ₹2,000 ನೀಡಿದ್ದು, ಉಳಿದ ಹಣವನ್ನು ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಸ್ನೇಹ, ಡಿವೈಎಸ್‌ಪಿ ಸುರೇಶ್, ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಮತ್ತು ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.
ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿಯ ಕೋಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟಸ್ವಾಮಿ ವಿರುದ್ಧ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.










