10.1 C
Munich
Home ಜಿಲ್ಲೆ ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ: ಮೂರು ತಾಲ್ಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ: ಮೂರು ತಾಲ್ಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ

Deputy Commissioner K.S. Lathakumari has declared a holiday for Anganwadis and all primary and high schools in Sakleshpur, Alur and Arakalgud taluks tomorrow (June 25).

ಹಾಸನ, ಜೂನ್ 24: ಜಿಲ್ಲೆಯಲ್ಲಿ ಸತತವಾಗಿ ಮುಂದುವರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳ ಅಂಗನವಾಡಿಗಳು ಹಾಗೂ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ (ಜೂನ್ 25) ರಜೆ ಘೋಷಿಸಿದ್ದಾರೆ.

ಈಗಾಗಲೇ ಸಕಲೇಶಪುರ ತಾಲ್ಲೂಕಿನ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳನ್ನೂ ಈ ಆದೇಶಕ್ಕೆ ಸೇರಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!