ಜು. 20ಕ್ಕೆ ಹೃದಯಾಘಾತ ಅರಿವು ಕಾರ್ಯಕ್ರಮ

ಹಾಸನ: ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಜು.೨೦ ರಂದು ಬೆಳಗ್ಗೆ ೧೦
ಗಂಟೆಗೆ ಸಾಲಗಾಮೆ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಹೃದಯಾಘಾತದ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಹಾಗೂ ಪ್ರಥಮ ಚಿಕಿತ್ಸಾ ವಿಧಾನಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕಿ ಡಾ.ಸಾವಿತ್ರಿ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಅರಿವು ಕಾರ್ಯಕ್ರಮ ಮತ್ತು ದಿನನಿತ್ಯ ಆಹಾರ ಕ್ರಮಗಳ ಬಗ್ಗೆ ಮಾಹಿತಿ ಮತ್ತು ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್ ವಿಧಾನಗಳ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮೈಸೂರು ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹೃದ್ರೋಗ ತಜ್ಞ ಡಾ.ವೈ.ಎಸ್ ಸೀಮಂತ್ ಅವರು ಹೃದಯಘಾತ ತಡೆಗಟ್ಟುವಿಕೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಹೃದಯ ಸಂಬAಧಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಪ್ರಶ್ನೆ ಕೇಳಿ ಉತ್ತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ನಗರದ ಎಸ್‌ಡಿಎಂ ಕಾಲೇಜು ಮತ್ತು ಆಸ್ಪತ್ರೆಯ ಡಾ.ಕವಿತಾ ಅವರು ದಿನನಿತ್ಯದ ಆಹಾರ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕರು ಹಾಗೂ ರಾಷ್ಟಿçÃಯ ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ.ತೇಜಸ್ವಿ ಹೆಚ್.ಜೆ ಅವರು ಹೃದಯಘಾತವಾದ ಸಂದರ್ಭದಲ್ಲಿ ತುರ್ತಾಗಿ ಮಾಡಬೇಕಾದ ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್ ವಿಧಾನಗಳ ತರಬೇತಿ ನೀಡುವರು ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದ ಅವರು, ಹೆಚ್ಚಿನ ಮಾಹಿತಿಗಾಗಿ ೮೦೭೩೪೮೫೩೧೭ ಈ ನಂಬರ್ ಸಂಪರ್ಕಿಸಲು ಕೋರಿದರು.

ಸುದ್ದಿಗೋಷ್ಟಿಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಉಪಸಭಾಪತಿ ಡಾ.ವೈ.ಎಸ್. ವೀರಭದ್ರಪ್ಪ, ಡಾ.ರಂಗಲಕ್ಷ್ಮಿ, ಬಿ.ಆರ್.ಉದಯ್ ಕುಮಾರ್, ಎಸ್‌ಎಸ್. ಪಾಷ, ಕೆ.ಟಿ.ಜಯಶ್ರೀ, ಶಬ್ಬೀರ್ ಅಹಮ್ಮದ್ ಇದ್ದರು.