ಆಲೂರು: ಸಕಲೇಶಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ಅವರ ಹುಟ್ಟುಹಬ್ಬದ ಅಂಗವಾಗಿ ಜು. 22 ರ ಮಂಗಳವಾರ ಆರೋಗ್ಯ ಉಚಿತ ತಪಾಸಣಾ ಶಿಬಿರ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಎಚ್.ಎಂ. ಲೋಹಿತ್ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷೆ ವಾಣಿ ಶಿವರಾಂ, ಜಿಲ್ಲಾಧ್ಯಕ್ಷ ಲೋಕೇಶ್ ಕುಮಾರ್ ಅವರ ನೇತೃತ್ವದಲ್ಲಿ ಛಲವಾದಿ ಮುಖಂಡ, ಕಾಂಗ್ರೆಸ್ ನಾಯಕ ಮುರಳಿ ಮೋಹನ್ ಅವರ 42 ನೇ ಹುಟ್ಟುಹಬ್ಬದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ತಪಾಸಣೆ ನಡೆಸಲಾಗುವುದು ಎಂದರು.
ಪ್ರಧಾನ ಕಾರ್ಯದರ್ಶಿ ಬಿ.ಎಂ. ಹರೀಶ್ ಮಾತನಾಡಿ, ಕಾಂಗ್ರೆಸ್ ನಾಯಕ ಮುರುಳಿ ಮೋಹನ್ ಅವರ 42ನೇ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹಾಸನದ ಎಂಎಂಎಂ ಆಸ್ಪತ್ರೆ ಸಹಯೋಗದಲ್ಲಿ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಮೂಳೆ ರೋಗ, ಮೆದುಳು ಮತ್ತು ಬೆನ್ನು ಮೂಳೆ ರೋಗ, ಸ್ತ್ರೀ ರೋಗ, ರೋಗಗಳ ಬಗ್ಗೆ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದ್ದು, ತಾಲೂಕಿನ ಜನತೆ, ಇದರ ಸದುಪಯೋಗ ಪಡೆದು ಕೊಳ್ಳುವಂತೆ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ದಲಿತ ಮುಖಂಡರಾದ ದೊಡ್ಡಯ್ಯ, ಯೋಗೇಶ್ ಭರತವಳ್ಳಿ, ಪುಟ್ಟಸ್ವಾಮಿ ಹಾಜರಿದ್ದರು.










