ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಇಂಜಿನಿಯರ್ ಮನೆಗಳ ಮೇಲೆ ಲೋಕಾಯುಕ್ತ ದಾಳಿ: ನಿದ್ರೆ‌ ಮಂಪರಿನಲ್ಲಿದ್ದವರಿಗೆ ಮುಂಜಾನೆಯೇ ಶಾಕ್!

Lokayukta officials raided Engineer Jayanna, the executive officer of the National Highways Department's Hassan division, in the early hours of this morning on charges of amassing assets beyond his income.

ಹಾಸನ, ಜುಲೈ 29: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆಯ ಆರೋಪದಡಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಈ ದಾಳಿ ಜಯಣ್ಣನ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನ ನಿವಾಸ, ಪತ್ನಿಯ ನಿವಾಸ, ಹಾರ್ಡ್‌ವೇರ್ ಅಂಗಡಿ ಮತ್ತು ಇತರೆ ಎರಡು ಸ್ಥಳಗಳ ಮೇಲೆ ನಡೆದಿದೆ. ಅಧಿಕಾರಿಗಳು ದಾಖಲೆ ಪರಿಶೀಲನೆ, ತಪಾಸಣೆಯಲ್ಲಿ ತೊಡಗಿದ್ದಾರೆ.

ಲೋಕಾಯುಕ್ತ ಎಸ್ಪಿ ಸ್ನೇಹ ನೇತೃತ್ವದಲ್ಲಿ ಹಾಸನ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ತಂಡ ಮತ್ತು ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ತಂಡ ಈ ದಾಳಿಯಲ್ಲಿ ಭಾಗವಹಿಸಿದ್ದು, ಆಸ್ತಿ ಪರೀಕ್ಷೆ ಮತ್ತು ದಾಖಲೆಗಳ ಸಂಗ್ರಹ ಆರಂಭವಾಗಿದೆ.