14.2 C
Munich
Home News ಹೆಚ್ಚುವರಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಾಸನ ಸಂಸದರ ಮನವಿ

ಹೆಚ್ಚುವರಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಾಸನ ಸಂಸದರ ಮನವಿ

ಹಾಸನ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವÀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ನಿಲ್ದಾಣ ಹಾಗೂ ಹಳಿ ನಿರ್ಮಾಣ ಕಾಮಗಾರಿಗೆ ವೇಗ ನೀಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಹೆಚ್ಚುವರಿ ಪ್ಯಾಸೆಂಜರ್ ರೈಲುಗಳ ಕಲ್ಪಿಸಬೇಕೆಂದು ಎಂದು ಮನವಿ ಸಲ್ಲಿಸಿದರು.

ಯುವ ಸಬಲೀಕರಣ ಸಂವಾದ

ನವದೆಹಲಿಯ ಸುಷ್ಮಾ ಸ್ವರಾಜ್ ಭವನದ ಭಾಸ್ಕರ್ ಹಾಲ್‌ನಲ್ಲಿ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ನೇಪಾಳ ಸರ್ಕಾರದ ಯುವ ಸಂಸದರ ಜೊತೆಗಿನ ಯುವ ಸಬಲೀಕರಣ ಸಂವಾದದಲ್ಲಿ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಿದರು. ಮುಖ್ಯವಾಗಿ ಭಾರತ ಹಾಗೂ ನೇಪಾಳದ ಯುವ ಶಕ್ತಿಯ ರಾಜಕಾರಣ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಹೇಗೆ ತೊಡಗಿಸಿಕೊಂಡಿದೆ ಎಂಬುದರ ಕುರಿತು ಚರ್ಚಿಸಿದರು.

error: Content is protected !!