15.2 C
Munich
Home News ಚನ್ನರಾಯಪಟ್ಟಣ: ಬೈಕ್– ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಚನ್ನರಾಯಪಟ್ಟಣ: ಬೈಕ್– ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

A couple died on the spot in a horrific road accident near Kalasinda village in Channarayapatna taluk.

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಕಲಸಿಂದ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗವೀಗೌಡ (38) ಮತ್ತು ರೂಪ (35) ಎಂದು ಗುರುತಿಸಲಾಗಿದೆ. ಇವರು KA-12-Q-5592 ನಂಬರ್‌ನ ಬೈಕ್‌ನಲ್ಲಿ ಚನ್ನರಾಯಪಟ್ಟಣದಿಂದ ಕಲಸಿಂದ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಚನ್ನರಾಯಪಟ್ಟಣದ ದಿಕ್ಕಿನಿಂದ ಬರುತ್ತಿದ್ದ KA-13-F-2081 ನಂಬರ್‌ನ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!