ಹಾಸನ: ರಾಜ್ಯ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಅ.17ರಂದು ಅಭಿನಂದನಾ ಸಮಾರಂಭ

A felicitation ceremony has been organized for the newly elected office bearers of the Karnataka State Government Employees Association from the district on Friday, October 17 at 5 pm at the Visvesvaraya Bhavan on M.G. Road in the city.

ಹಾಸನ: ನಗರ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಎಲ್ಲಾ ಸರಕಾರಿ, ಆರೆ ಸರಕಾರಿ ಇಲಾಖೆಯ ನೌಕರರ ಸಂಘಗಳ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲೆಯಿಂದ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳಿಗೆ ಇದೇ ಅ.17ರ ಶುಕ್ರವಾರದಂದು ಸಂಜೆ 5 ಗಂಟೆಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಸಂಘದಲ್ಲಿ ಜಿಲ್ಲೆಯಿಂದ ಹಲವಾರು ಪ್ರಮುಖರು ಸ್ಥಾನ ಪಡೆದಿದ್ದಾರೆ.

ಜಿಲ್ಲಾ ರಾಜ್ಯ ನೌಕರರ ಕೋ-ಆಪರೇಟಿವ್ ಸೊಸೈಟಿ ಹಾಗೂ ಜಿಲ್ಲಾ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಮತ್ತು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ ಕೆ.ಎಂ.ಶ್ರೀನಿವಾಸ್ ಅವರು ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನಮ್ಮ ಸೊಸೈಟಿಯ ಗೌರವಾಧ್ಯಕ್ಷ ಜಿ.ಪಿ.ವಿಶ್ವನಾಥ ಅವರು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಸೊಸೈಟಿಯ ನಿರ್ದೇಶಕರಾದ ಎಸ್.ಮಧು ಅವರು ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹಾಗೂ ಸದಸ್ಯರಾದ ರಾಜು ಟಿ. ಅವರು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇದು ನಮಗೆಲ್ಲ ಸಂತೋಷ ತಂದಿದೆ ಎಂದರು.

ನಮ್ಮ ಸೊಸೈಟಿ ವತಿಯಿಂದ ಹಾಗೂ ವಿವಿಧ ವೃಂದ ಸಂಘಗಳು, ಇಲಾಖೆಯ ಆತ್ಮೀಯರು ಮತ್ತು ಸ್ವಾಭಿಮಾನಿ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಿಂದ ರಾಜ್ಯ ಸಂಘದ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿರುವವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಎಲ್ಲರೂ ಬಂದು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಹಾಸನದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವಹಿಸಲಿದ್ದಾರೆ. ಅಭಿನಂದನಾ ಸಮರ್ಪಣೆಯನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ನಡೆಸಿಕೊಡಲಿದ್ದಾರೆ. ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಟಿ. ರಾಜು, ವಿಶ್ವನಾಥ ಜಿ.ಪಿ. ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿ ಎನ್. ಮಧು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ಗೌರವಾಧ್ಯಕ್ಷ ಬಿ.ಎನ್. ರಾಜಶೇಖರಪ್ಪ, ನಿರ್ದೇಶಕ ಎನ್. ಪಾಲಾಕ್ಷ, ಉಪಾಧ್ಯಕ್ಷ ಬಿ.ಆರ್.ಧರ್ಮ, ಗೌರವ ಕಾರ್ಯದರ್ಶಿ ಸತೀಶ್, ಉಪಾಧ್ಯಕ್ಷ ಗೋಪಾಲಕೃಷ್ಣ ಮೊದಲಾದವರಿದ್ದರು. ಕಾರ್ಯಕ್ರಮ ನಂತರ ಸಂಜೆ ಮಿಮಿಕ್ರಿ ಗೋಪಿ ಮತ್ತು ತಂಡದವರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ.