ಕಾಫಿ ತೋಟದಲ್ಲಿ ಮರಗಸಿ ಮಾಡುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

A laborer died on the spot after accidentally falling while cutting a tree in a coffee plantation at Hemmige village of Alur taluk.

ಹಾಸನ, ಜುಲೈ 15: ಆಲೂರು ತಾಲ್ಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಮರಗಸಿ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತರಾಗಿದ್ದಾರೆ.

ಬಡಿಗೆಕೊಪ್ಪಲು ಗ್ರಾಮದ ನಿವಾಸಿ ಶಾಂತರಾಜು (42) ಮೃತಪಟ್ಟಿದ್ದಾರೆ,  ಅವರು ಹರೀಶ್ ಎಂಬುವರ ಕಾಫಿ ತೋಟದಲ್ಲಿ ಮರಗೆಲಸ ಮಾಡುತ್ತಿದ್ದರು. ಮಳೆಯ ಸಂದರ್ಭದಲ್ಲಿಯೂ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಯ ಸ್ಥಳಕ್ಕೆ ಆಲೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ