ಬೇಲೂರು: ಪಟ್ಟಣದಲ್ಲಿ ನಡೆದ ನಡುಬೀದಿ ಹತ್ಯೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಯೊಬ್ಬ ಮಚ್ಚು ಹಿಡಿದು ವ್ಯಕ್ತಿಯ ಮೇಲೆ ಭೀಕರ ದಾಳಿ ನಡೆಸಿದ ಘಟನೆ ಬೇಲೂರು ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಗಿರಿ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೋಳಿ ಅಂಗಡಿ ಸೀನ ಎಂಬಾತನೇ ಗಿರಿಯ ಮೇಲೆ ಮಚ್ಚಿನಿಂದ ಮನಬಂದಂತೆ ಕೊಚ್ಚಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಬೇಲೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಸೀನನ ಶೋಧ ಕಾರ್ಯಮುಂದುವರಿಸಿದ್ದಾರೆ.
ಈ ಘಟನೆ ಬೇಲೂರು ಪಟ್ಟಣದಲ್ಲಿ ತೀವ್ರ ಆತಂಕ ಉಂಟುಮಾಡಿದೆ.










