20.1 C
Munich
Home ಕ್ರೈಮ್‌ ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೇಮಾವತಿ ನಾಲೆಯಲ್ಲಿ ದಂಪತಿ ಶವ ಪತ್ತೆ| ಬಾಲಕಿ ಶವಕ್ಕಾಗಿ ಮುಂದುವರಿದ ಶೋಧ

ಹಾಸನ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.

ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗಂಡ-ಹೆಂಡತಿ ಹಾಗೂ ಪುತ್ರಿ.

ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಪತ್ನಿ ಶ್ವೇತಾ
ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್ ಅದನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು.

ಕಳೆದ ಮಂಗಳವಾರದಿಂದ ಕಾಣಿಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದ್ದು, ಶವಗಳನ್ನು ಹೊರ ತೆಗೆದ ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು, ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!