6.9 C
Munich
Home ಕ್ರೈಮ್‌ 112 ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

112 ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

ಹಾಸನ, ಏಪ್ರಿಲ್ 09:  ನಗರದ ಬಿ.ಎಂ. ರಸ್ತೆಯಲ್ಲಿ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪೊಲೀಸರ 112 ತುರ್ತು ಸೇವಾ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಮೃತ ಯುವಕನನ್ನು ಶಶಾಂಕ್ (21) ಎಂದು ಗುರುತಿಸಲಾಗಿದೆ. ಶಶಾಂಕ್, ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ವಿದ್ಯಾರ್ಥಿಯಾಗಿದ್ದ.

ಸಂಜೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ವೇಗವಾಗಿ ಬಂದ 112 ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶಶಾಂಕ್‌ನನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.ಘಟನೆಯ ಸ್ಥಳಕ್ಕೆ ಹಾಸನ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!