2.2 C
Munich
Home ಜಿಲ್ಲೆ ಹಾರ್ಟ್ ಅಟ್ಯಾಕ್ ಗೆ ಹಾಸನದಲ್ಲಿ 21 ವರ್ಷದ ಯುವಕ ಬಲಿ!

ಹಾರ್ಟ್ ಅಟ್ಯಾಕ್ ಗೆ ಹಾಸನದಲ್ಲಿ 21 ವರ್ಷದ ಯುವಕ ಬಲಿ!

A young man died of a sudden heart attack in Chikkakondagula village last night.

ಹಾಸನ, ಜುಲೈ 4: ನಗರ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ದಿಢೀರ್ ಹೃದಯಾಘಾತದಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕನನ್ನು ಮದನ್ (21) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವವರಾಗಿದ್ದು, ತಾಯಿಯ ಜೊತೆ ಚನ್ನಪಟ್ಟಣದಲ್ಲಿ ವಾಸವಾಗಿದ್ದರು., ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದಲ್ಲಿರುವ ತನ್ನ ಬಾವನ ಮನೆಯಲ್ಲಿದ್ದರು.

ನಿನ್ನೆ ರಾತ್ರಿ ಮನೆಯಲ್ಲಿದ್ದಾಗ ಮದನ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

error: Content is protected !!