20.1 C
Munich
Home ಕ್ರೈಮ್‌ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲು

ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲು

ಹಾಸನ : ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ಲಿ, ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಹಾಂದಿ ಗ್ರಾಮದ ಭರತ್ (27) ಮತ್ತು ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಮೂಲದ ಪ್ರಕಾಶ್, ಪ್ರಕಾಶ್ (29) ಮೃತ ಯುವಕರು

ಭರತ್ ಹಾಗೂ ಪ್ರಕಾಶ್

ಬಿಸಿಲು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ಸ್ನೇಹಿತರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರ ತೆಗೆದಿದೆ. ಸಕಲೇಶಪುರ ನಗರ ಠಾಣೆ‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!