ಹಾಸನ, ಜುಲೈ 6, 2025: ಹೊಳೆನರಸೀಪುರ ತಾಲ್ಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ (44) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಆನಂದ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಈ ಬಗ್ಗೆ ಪತ್ನಿಗೆ ತಿಳಿಸಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಆಟೋಗೆ ಏರ್ಪಾಡು ಮಾಡುವಷ್ಟರಲ್ಲಿ ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆನಂದ್ ಅವರನ್ನು ಹೊಳೆನರಸೀಪುರದ ಆಸ್ಪತ್ರೆಗೆ ಕರೆದೊಯ್ದರಾದರೂ, ಅವರು ಈಗಾಗಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ದೃಢಪಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಲ್ಲಿ ಹೃದಯಾಘಾತದಿಂದ 37 ಮಂದಿ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.










