ಅರಕಲಗೂಡು: ಸಾಲಬಾಧೆ ತಾಳಲಾರದೆ  ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾ*

ಅರಕಲಗೂಡು: ಸಾಲಬಾಧೆ ತಾಳಲಾರದೆ ವಿಷ ಸೇವಿಸಿದ್ದ ತಾಲ್ಲೂಕಿನ ಕೊಣನೂರು ಹೋಬಳಿಯ ವೆಂಕಟೇಶ್ವರ ಗ್ರಾಮದ ರೈತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ರೈತ ರಾಜೇಗೌಡ (60) ಮೃತರು. ಸಿದ್ದಾಪುರ ಗೇಟ್‌ನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸುಮಾರು 5 ಲಕ್ಷ ರೂ. ಸಾಲ ಪಡೆದುಕೊಂಡಿದ್ದು, ಜೊತೆಗೆ ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವ ಒತ್ತಡ ಮತ್ತು ಆತಂಕದಿಂದ ಮನನೊಂದು ಜ.6 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹಿಮ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಸಾಲಬಾಧೆ ತಾಳಲಾರದೆ ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾ*