9.4 C
Munich
Home News ಅರಕಲಗೂಡು: ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಆತ್ಮ*ಹತ್ಯೆ

ಅರಕಲಗೂಡು: ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಆತ್ಮ*ಹತ್ಯೆ

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶಿರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಣ್ಣ (39) ಹಾಗೂ ಶಿಲ್ಪಾ (30) ಮೃ*ತಪಟ್ಟ ದಂಪತಿ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಶಿಲ್ಪಾ ಅವರು ಕಿರಣ್ ಎಂಬುವವರೊಂದಿಗೆ ತೆರಳಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಕುಟುಂಬಸ್ಥರು ರಾಜಿ ಪಂಚಾಯಿತಿ ನಡೆಸಿದ್ದರು ಎನ್ನಲಾಗಿದೆ.

ಇಂದು ಇದೇ ವಿಚಾರವಾಗಿ ದಂಪತಿ ನಡುವೆ ಮತ್ತೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಈ ವೇಳೆ ಶಿಲ್ಪಾ ಅವರು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತ್ನಿ ಮೃತಪಟ್ಟಿರುವುದನ್ನು ಕಂಡ ಶಿವಣ್ಣ ಅವರೂ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸಾ*ವಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ವಿವರಗಳ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

error: Content is protected !!