ಅರಸೀಕೆರೆ: ಕುಸುಮ್-ಸಿ ಯೋಜನೆಯಡಿ ಅರಸೀಕೆರೆ ತಾಲ್ಲೂಕಿನ ಸಂಕೋಡನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ “ಸೋಲಾರ್ ಪಾರ್ಕ್” ಯೋಜನೆ ಅನುಷ್ಠಾನ ಸ್ಥಳ ಪರಿಶೀಲನೆ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಾಕಿ ಉಳಿದಿರುವ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದರು. ಹಗಲು ಹೊತ್ತಿನಲ್ಲಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸರಬರಾಜು ಮಾಡಬೇಕಾದರೆ ಈ ಕೆಲಸ ಶೀಘ್ರವಾಗಿ ಆಗಬೇಕು ಶಾಸಕ ಶಿವಲಿಂಗೇಗೌಡ ಹೇಳಿದರು.
ಈ ವೇಳೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್, ಡಿಸಿ ಲತಾಕುಮಾರಿ, ಎಸ್ಪಿ ಮೊಹಮ್ಮದ್ ಸುಜೀತಾ ಇತರರು ಉಪಸ್ಥಿತರಿದ್ದರು.










