ಬೇಲೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯ ಜತೆಗೆ ಕ್ರೀಡೆ–ಸಾಂಸ್ಕೃತಿಕ ಚಟುವಟಿಕೆ ಅಗತ್ಯ- ಬಿ.ಕೆ. ಭಗವಾನ್

B.K. Bhagwan, president of Shantala Vidya Sanstha, said that sports, literature and cultural activities are as important as academics in the all-round development of Belur students.

ಬೇಲೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯ ಎಷ್ಟು ಮುಖ್ಯವೋ ಹಾಗೆ ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತೆ್ಯಂದು ಶಾಂತಲಾ ವಿದ್ಯಾ ಸಂಸ್ಥೆ ಅದ್ಯಕ್ಷ ಬಿ,ಕೆ,ಭಗವಾನ್ ಹೇಳಿದರು.

ಪಟ್ಟಣದ ಶಾಂತಲಾ ವಿದ್ಯಾ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯುಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗಿಗೆ ಪಠ್ಯದ ಶಿಕ್ಷಣದೊಂದಿಗೆ ಅವರಲ್ಲಿ ಆತ್ಮವಿಶ್ವಾಸ, ಶಿಸ್ತು ಸಂಯಮ, ಕ್ರೀಡೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಶಿಕ್ಷಕರು ಮಕ್ಕಳ ಪ್ರತಿಭೆಗೆ ಅನುಗುಣವಾಗಿ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡಬೇಕು. ಜತೆಗೆ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಂಸ್ಥೆ ಸದಾ ಬದ್ಧವಾಗಿದೆ. ಶಿಕ್ಷಕರ ಶ್ರಮ, ಪೋಷಕರ ಸಹಕಾರ ಮತ್ತು ವಿದ್ಯಾರ್ಥಿಗಳ ಆಸಕ್ತಿ ಶಾಲೆಯ ಪ್ರಗತಿಗೆ ಮೂಲ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಉತ್ತೇಜಿಸುವ ಇನ್ನಷ್ಟು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಶಾಂತಲಾ ವಿದ್ಯಾ ಸಂಸ್ಥೆ ಕಾರ್ಯದರ್ಶಿ ತೊ.ಚ.ಅನಂತ ಸುಬ್ಬರಾಂ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ನಮ್ಮ ವಿದ್ಯಾ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಮತ್ತು ಶೈಕ್ಷಣಿಕ, ಕ್ರೀಡೆ ಹಾಗೂ ಸಾಹಿತ್ಯ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಶಾಲಾ ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳು ಮಕ್ಕಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಶಿಕ್ಷಕರ ನಿಷ್ಠೆ, ಪೋಷಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದಲೇ ಇಂದು ಸಂಸ್ಥೆ ಉತ್ತಮವಾಗಿ ಬೆಳೆಯುತ್ತಿದೆ ಎಂದರು.

ಪುರಸಭೆ ಅದ್ಯಕ್ಷೆ ಉಷಾ ಸತೀಶ್, ಶಾಂತಲಾ ವಿದ್ಯಾಸಂಸ್ಥೆ ಉಪಾಧ್ಯಕ್ಷ ಹೆಚ್.ಸಿ.ಸುರೇಶ್, ನಿರ್ದೇಶಕ ಶಿವಶಂಕರ್, ಆಡಳಿತಾಧಿಕಾರಿ ಸುನಿತಾ, ಮುಖ್ಯ ಶಿಕ್ಷಕರಾದ ನಾರಾಯಣ್, ಅಶ್ವಿನಿ, ಲತಾ ಸೇರಿದಂತೆ ಇತರರಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯರ್ಥಿಗಳನ್ನು ಮೈಸೂರಿನ ವಕೀಲ ದಿನಕರ್ ಅಭಿನಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲಾಯಿತು.

B.K. Bhagwan, president of Shantala Vidya Sanstha, said that sports, literature and cultural activities are as important as academics in the all-round development of Belur students.