ಮಾಡಾಳು: ಸರಳ, ಸಜ್ಜನಿಕೆ ಹಾಗೂ ಸ್ನೇಹಮಯಿ ವ್ಯಕ್ತಿತ್ವ ಹೊಂದಿದ್ದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬುಧವಾರ ನಿರಂಜನ ಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿ.ಸಿ. ನಾಗೇಶ್ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದರು. ವೈಚಾರಿಕ ಬದ್ಧತೆ ಮತ್ತು ಜನಪರ ಕಾಳಜಿಗೆ ಅವರು ಹೆಸರಾಗಿದ್ದರು ಎಂದು ಸ್ಮರಿಸಿದರು.
ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅವರು ತಂದ ಹಲವು ಸುಧಾರಣೆಗಳು ಹಾಗೂ ಅವರ ಸಂಘಟನಾ ಕೌಶಲ್ಯ ಸದಾ ಸ್ಮರಣೀಯವಾಗಿರಲಿದೆ ಎಂದು ಶ್ರೀ ರುದ್ರಮುನಿ ಸ್ವಾಮೀಜಿ ಹೇಳಿದರು.
ನಾಗೇಶ್ ಅವರ ನಿಧನದಿಂದ ಸಮಾಜ ಹಾಗೂ ಸಾರ್ವಜನಿಕ ಬದುಕಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಶ್ರೀಗಳು ಪ್ರಾರ್ಥಿಸಿದರು.










