ಬೇಲೂರಿನ ಚೆನ್ನಕೇಶವ ದೇವಾಲಯದ ಹುಂಡಿ‌ ಹಣ ಕಳ್ಳತನ; ಎಣಿಕೆ ವೇಳೆ ಲಕ್ಷ ಲಕ್ಷ ಹಣ ಎಗರಿಸಿದ ವಿಡಿಯೋಗ್ರಾಫರ್

ಹಾಸನ: ಬೇಲೂರಿನ ಚನ್ನಕೇಶವ ದೇವಾಲಯದ ಹುಂಡಿ ಹಣ ಕಳ್ಳತನ; ಎಣಿಕೆ ವೇಳೆ ₹1.98 ಲಕ್ಷ ಎಗರಿಸಿದ ವಿಡಿಯೋಗ್ರಾಫರ್ ಪೊಲೀಸ್ ವಶಕ್ಕೆ

ಹಾಸನ, ಜು. 9: ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ದೇವಾಲಯದ ಹುಂಡಿ ಎಣಿಕೆ ವೇಳೆ ಹಣ ಕಳ್ಳತನ ಮಾಡಿದ ಆರೋಪದ ಮೇಲೆ ವಿಡಿಯೋಗ್ರಾಫರ್ ನೀಲಕಂಠನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಂಡಿ ಎಣಿಕೆ ಸಂದರ್ಭದಲ್ಲಿ ಸುಮಾರು ₹1.98 ಲಕ್ಷ ಹಣವನ್ನು ಕಳವು ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ಹಿಂದೆ ಇನ್ನಾರಾದರೂ ಅಧಿಕಾರಿಗಳು ಅಥವಾ ಸಿಬ್ಬಂದಿಯ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಮಾಹಿತಿ ದೊರೆಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹುಂಡಿ ಎಣಿಕೆ ವೇಳೆ ಹಣ ಕಳ್ಳತನ ನಡೆದಿರುವುದು ದೃಢಪಟ್ಟಿದೆ ಎಂದು ತಿಳಿಸಿದರು.

ಅವರ ಪ್ರಕಾರ, ಪ್ರವಾಸಿ ಮಿತ್ರ ಒಬ್ಬರು ಆರೋಪಿಯ ಕೃತ್ಯವನ್ನು ಗಮನಿಸಿದ್ದು, ಜರ್ಕಿನ್ ಒಳಗೆ ತನ್ನ ಗುರುತನ್ನು ಮರೆಮಾಚಿಕೊಂಡು ಆರೋಪಿ ಸುಮಾರು ₹1.98 ಲಕ್ಷ ಹಣವನ್ನು ಕಳವು ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿಯಾಗಿರುವ ವಿಡಿಯೋಗ್ರಾಫರ್ ನೀಲಕಂಠನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹುಂಡಿ ಎಣಿಕೆಯಲ್ಲಿ ಭಾಗಿಯಾಗಿದ್ದ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ.

ಪೊಲೀಸರು ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆ ಹಾಗೂ ಸ್ಥಳದಲ್ಲಿದ್ದ ಸಿಬ್ಬಂದಿಯ ಮಾಹಿತಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಪ್ರವಾಸಿ ಮಿತ್ರ ಗಮನಿಸಿದ ಬಳಿಕ ಬೆಳಕಿಗೆ ಬಂದ ಕೃತ್ಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ