Bengaluru:ಸಿಎಂ ಮೇಲೆ ಯಾರೋ ಮಾಟ ಮಾಡಿಸಿರಬಹುದು: ರಾಜಣ್ಣ

Bengaluru|ಬೆಂಗಳೂರು; ಮುಖ್ಯಮಂತ್ರಿ siddaramaiah ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ.

​ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಟಗರು. ಟಗರು ಯಾವತ್ತಿದ್ದರೂ ಟಗರೇ ಅವರು ಅಸಹಾಯಕರಾಗಲ್ಲ’ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

​’ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ ಶಕ್ತಿ ಹೊಂದಿರುವ ಸಿಎಂ ಇಷ್ಟೊಂದು ಅಸಹಾಯಕರಾಗಿರುವುದನ್ನು ಎಂದೂ ನೋಡಿರಲಿಲ್ಲ. ಈಗ ನೋಡಿದರೆ ಅವರ ಮೇಲೆ ಯಾರಾದರೂ ಮಾಟ-ಮಂತ್ರ ಮಾಡಿದ್ದಾರೆಯೇ ಎನಿಸುತ್ತದೆ. ಆ ಬಗ್ಗೆ ನಾನು ವಿಚಾರ ಮಾಡುತ್ತಿದ್ದು, ತನಿಖೆ ಮಾಡಿಸುತ್ತಿದ್ದೇನೆ’ ಎಂದರು.

​ಸಿಎಂ ಹಾಗೂ ನಾನು ಮಾಟ ಮಂತ್ರದಲ್ಲಿ ನಂಬಿಕೆ ಇಲ್ಲದವರು. ಮನುಷ್ಯರ ಮೇಲೆ ಪರಿಣಾಮ ಆಗಬೇಕು ಎಂದರೆ ಅವರು ಆಸ್ತಿಕರಾಗಿರಬೇಕು ಎಂದೇನೂ ಇಲ್ಲ. ಹೀಗಾಗಿ ಅವರ ಮೇಲೆ ಮಾಟ, ಮಂತ್ರ ಆಗಿರಬಹುದು ಎನಿಸುತ್ತಿದೆ ಎಂದರು.