-0.1 C
Munich
Home News ಮಕ್ಕಳಾಗಲಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂ*ದ ಪತ್ನಿ!

ಮಕ್ಕಳಾಗಲಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂ*ದ ಪತ್ನಿ!

ಮಕ್ಕಳಿಲ್ಲದ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ; ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ

ಬೆಂಗಳೂರು,ನ,12,2026 (kannadapost.com): ಮಕ್ಕಳಾಗಲಿಲ್ಲ ಎಂದು ಪದೇಪದೇ ಹೀಯಾಳಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಈ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದ್ದು, ಪತ್ನಿ ಮಾಲಾಶ್ರೀ ಕೊಲೆ ಆರೋಪ ಎದುರಿಸುತ್ತಿದ್ದಾರೆ.

ರಾಜಶೇಖರ್ ಬ್ಯಾಂಕ್‌ನ ಸಾಲ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಮಕ್ಕಳಾಗದ ವಿಚಾರವಾಗಿ ಮನೆಯಲ್ಲಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಹಗಲಿನಲ್ಲಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದ ಬಳಿಕ ಮಕ್ಕಳಾಗಿಲ್ಲ ಎಂದು ಹೀಯಾಳಿಸಿ ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ.

ಮಂಗಳವಾರ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪತ್ನಿ ಮಾಲಾಶ್ರೀ ಚಾಕುವಿನಿಂದ ಇರಿದ ಪರಿಣಾಮ ರಾಜಶೇಖರ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯ ಹಿಂದಿನ ನಿಖರ ಕಾರಣ ಹಾಗೂ ಇತರ ವಿವರಗಳ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

error: Content is protected !!