ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರಿಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶಿಸಿದ್ದರು.
ಶರಣ್ ಪಂಪ್‌ವೆಲ್ ಅವರು ಬಲಪಂಥೀಯ ವಿಚಾರ ಧಾರೆಗಳಿಂದ ಪ್ರಭಾವಿತರಾಗಿ ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅವರು ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
Cases have been registered against Sharan Pumpwell in various districts for making provocative speeches influenced by right-wing ideology.










