Channarayapatna:ಪಂಚಾಯಿತಿ ಚುನಾವಣೆ: ಜೆಡಿಎಸ್-ಬಿಜೆಪಿ ದೋಸ್ತಿ-ಸಮೀಕ್ಷೆ ಆಧಾರದಲ್ಲಿ ಟಿಕೆಟ್ ಹಂಚಿಕೆ ಹೊರತು ಪ್ರಾಬಲ್ಯದ ಮೇಲಲ್ಲ – ಪ್ರೀತಮ್ ಗೌಡ

ಹಾಸನ ಜಿಲ್ಲೆಯ ಪಂಚಾಯಿತಿ ಚುನಾವಣೆಯಲ್ಲಿ ಸಮೀಕ್ಷೆ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಮಾಜಿ ಶಾಸಕ ಪ್ರೀತಮ್ ಗೌಡ ಚನ್ನರಾಯಪಟ್ಟಣದಲ್ಲಿ ತಿಳಿಸಿದ್ದಾರೆ.

Channarayapatna ಚನ್ನರಾಯಪಟ್ಟಣ | ಕನ್ನಡಪೋಸ್ಟ್ ವರದಿ (www.kannadapost.com): ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂಬುದನ್ನು ಸಮೀಕ್ಷೆಗಳ ಆಧಾರದಲ್ಲಿ ನಿರ್ಧರಿಸಲಾಗುವುದು ಎಂದು BJP ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ preetam gowda ಹೇಳಿದರು.

ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ ಶುಕ್ರವಾರ ಬಿಜೆಪಿ ಶ್ರವಣಬೆಳಗೊಳ ಮಂಡಲ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಸಂಘಟನಾ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪ್ರಾಬಲ್ಯ ಆಧಾರದಲ್ಲಿ ಟಿಕೆಟ್ ಇಲ್ಲ

ಚುನಾವಣೆಯಲ್ಲಿ ಕೇವಲ ಪ್ರಾಬಲ್ಯದ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡುವುದಿಲ್ಲ. ಕ್ಷೇತ್ರವಾರು ಸಮೀಕ್ಷೆ ನಡೆಸಿ ಯಾವ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚು ಎಂಬುದನ್ನು ಗಮನಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರೀತಮ್ ಗೌಡ ತಿಳಿಸಿದರು.


ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ನಿರ್ಧಾರ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಕೋರ್ ಕಮಿಟಿಯ ಮುಂದೆ ಮಂಡಿಸಲಾಗುತ್ತದೆ.

ಅಲ್ಲಿ ಕೈಗೊಳ್ಳುವ ನಿರ್ಧಾರವನ್ನು ದೆಹಲಿಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.


ಬೂತ್ ಮಟ್ಟದಲ್ಲಿ ಸಂಘಟನೆ

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕೆಲಸ ನಡೆಯುತ್ತಿದೆ.

ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಬಿಜೆಪಿ ಪಕ್ಷದ ಪ್ರಮುಖ ಗುರಿಯಾಗಿದೆ. ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.


ರಾಜ್ಯಾದ್ಯಂತ ಸಂಘಟನಾ ಪ್ರವಾಸ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯಾಧ್ಯಕ್ಷರು ರಾಜ್ಯದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯಾದ್ಯಂತ ಪ್ರವಾಸ ಮಾಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ನಡೆಸಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಶ್ರವಣಬೆಳಗೊಳ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಸಂಘಟನೆಯತ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತಿ

ಕಾರ್ಯಕ್ರಮದಲ್ಲಿ

  • ಬಿಜೆಪಿ ತಾಲೂಕು ಅಧ್ಯಕ್ಷ ಪರಮ ಗಂಗಾಧರ್
  • ಗ್ರಾಮ ಪಂಚಾಯಿತಿ ಸದಸ್ಯೆ ಸಂಗೀತ ರೂಪೇಶ್
  • ನಾಗೇಶ್ ಗೌಡ
  • ಕೆರೆ ಬೀದಿ ಜಗದೀಶ್
  • ಧರಣೇಶ್

ಹಾಗೂ ತಾಲೂಕು ವ್ಯಾಪ್ತಿಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.