Channarayapattana|ಚನ್ನರಾಯಪಟ್ಟಣ: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆ ತಾಲ್ಲೂಕಿನ ಹಿರೀಸಾವೆಯ ಬಳಿ ನಡೆದಿದೆ.
ತಾಲ್ಲೂಕಿನ ಬೂಕ ಗ್ರಾಮದ ರಾಜಮ್ಮ (48) ಮೃತಪಟ್ಟವರು.
ಘಟನೆಯ ವಿವರ: ರಾಜಮ್ಮ ಅವರು ಹಿರೀಸಾವೆಯಿಂದ ಮನೆಗೆ ಬೇಕಾದ ತರಕಾರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು.
ರೈಲ್ವೆ ಮಾರ್ಗದ ಪಕ್ಕದಲ್ಲಿಯೇ ಇವರ ಮನೆ ಇದ್ದು, ಮಾರ್ಗದಲ್ಲಿ ನೆಡೆದುಕೊಂಡು ಹೋಗುತ್ತಿದ್ದ ವೇಳೆ ಮದ್ಯಾಹ್ನ 3 ಗಂಟೆಯಲ್ಲಿ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಮೆಮೂ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗಿದ್ದು ಬೂಕ ಗ್ರಾಮದಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಿತು.










