ಚಿಕ್ಕಮಗಳೂರು:ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ನಡೆದ ಚಿರತೆ ದಾಳಿಯಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.
ಸಾನ್ವಿ (5) ಮೃತ ಬಾಲಕಿ.ಮ ನೆಯ ಹಿಂಭಾಗದಲ್ಲಿದ್ದ ಕೊಟ್ಟಿಗೆಯಲ್ಲಿದ್ದಾಗ ಮಗು ಇದ್ದಾಗ ಅಚಾನಕ್ ಚಿರತೆ ದಾಳಿ ನಡೆಸಿದ್ದು, ಮಗು ಜೋರಾಗಿ ಅತ್ತ ಶಬ್ದ ಕೇಳಿ ಓಡಿ ಬಂದ ಮನೆಯವರು ತಡೆಹಿಡಿಯಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ.
ಚಿರತೆ ಮಗುನ್ನು ಹಿಡಿದು ಕಾಡಿನತ್ತ ಎಳೆದುಕೊಂಡು ಹೋಗಿದೆ. ಬಳಿಕ ಸ್ಥಳೀಯರು ನಡೆಸಿದ ಹುಡುಕಾಟದಲ್ಲಿ ಕಾಡಂಚಿನಲ್ಲಿ ಸಾನ್ವಿಯ ಮೃತದೇಹ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










