ಚಿಕ್ಕಮಗಳೂರು, ಶೃಂಗೇರಿ:ಹಠಾತ್ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಶೃಂಗೇರಿಯಲ್ಲಿ ನಡೆದಿದೆ.
ದಿಶಾ (22) ಮೃತ ವಿದ್ಯಾರ್ಥಿನಿ. ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದರು. ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್ನಲ್ಲಿ ವಾಸವಿದ್ದ ದಿಶಾ ಅವರು ಇಂದು ಹಠಾತ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.
ತಕ್ಷಣ ಸಹಪಾಠಿಗಳು ಮತ್ತು ಹಾಸ್ಟೆಲ್ ಸಿಬ್ಬಂದಿ ನೆರವಿಗೆ ಧಾವಿಸಿದರೂ, ಅಷ್ಟರಲ್ಲಿ ದಿಶಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನವರಾಗಿದ್ದಾರೆ. ಯುವ ವಯಸ್ಸಿನಲ್ಲೇ ಸಂಭವಿಸಿದ ಈ ಅಕಾಲಿಕ ಸಾವಿನಿಂದ ಕುಟುಂಬದವರು, ಸಹಪಾಠಿಗಳು ಹಾಗೂ ಕಾಲೇಜು ವಲಯದಲ್ಲಿ ಆಘಾತ ಉಂಟು ಮಾಡಿದೆ.
Chikkamagaluru, Sringeri: A 22-year-old student died of a sudden heart attack in a tragic incident in Sringeri.










