ಶಾಲಾ ಮಕ್ಕಳಿಗೆ ಇನ್ನೂ ಹತ್ತು ದಿನ ದಸರಾ ರಜಾ ಮಜ: ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ರಜೆ

CM Siddaramaiah said that the Dussehra vacation has been extended for all government schools in the state until October 18 for a social and educational survey.

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಅ.18ರವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸರ್ಕಾರದಿಂದ ನಿರ್ಧಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಖಾಸಗಿ ಶಾಲೆಗಳಿಗೆ ರಜೆ ವಿಸ್ತರಣೆ ಅನ್ವಯ ಆಗಲ್ಲ. ಇನ್ನೂ ಒಂದಷ್ಟು ದಿನಗಳ ಕಾಲ ಅವಕಾಶ ಕೊಡಬೇಕೆಂದು ಕೇಳಿದ್ದರು. ರಾಜ್ಯ ಸರ್ಕಾರದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ ಪ್ರಮಾಣದಲ್ಲಿ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳುಲು ನಿರ್ಧಾರವಾಗಿದೆ ಎಂದು ಹೇಳಿದರು.

ಸದ್ಯ ಸಮೀಕ್ಷೆಯಲ್ಲಿ 1.20ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಪೂರ್ಣ ಕೆಲಸ ಆಗಬೇಕು ಅಂದರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ಅ.18 ರವರಗೆ ಶಾಲೆಗಳಿಗೆ ರಜೆ ಸೆ.22ರಿಂದ ಸಮೀಕ್ಷೆಯನ್ನು ಪ್ರಾರಂಭ ಮಾಡಿದ್ದೆವು. ಇಂದಿಗೆ ಸರ್ವೆ ಮುಗಿಸಬೇಕು ಎಂಬ ತೀರ್ಮಾನ ಮಾಡಿದ್ದೆವು. ಆದರೆ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ ಎಂದರು.