ಸಕಲೇಶಪುರ: ಲೋಕಸಭಾ ಗೆಲುವೇ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಕ್ಕೆ ಸಾಕ್ಷಿ: ಸಂಪಂಗಿ

Congress candidate wins Lok Sabha elections, Congress in Hassan district This is a clear evidence of the party's strength, says former MLA from the region's Congress state. Vice President Sampangi said.

ಸಕಲೇಶಪುರ: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಸೋಲು ಸಂಭವಿಸಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದು ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಪ್ರದೇಶ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸಂಪಂಗಿ ಹೇಳಿದರು.

ತಾಲೂಕಿನ ಬಾಳುಪೇಟೆಯಲ್ಲಿ ನಡೆದ ಬೆಳಗೋಡು ಹೋಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ಹಿರಿಯ ನಾಯಕರು ಹಾಗೂ ವಿದ್ಯಾರ್ಥಿ ರಾಜಕೀಯದಿಂದ ಬಂದ ಕಾರ್ಯಕರ್ತರ ಶ್ರಮವೇ ಇಂದಿನ ಬಲಕ್ಕೆ ಕಾರಣವಾಗಿದೆ ಎಂದರು.

ಪಕ್ಷದ ಒಳಜಗಳಗಳಿಂದ ಮೂರನೇ ವ್ಯಕ್ತಿಗಳಿಗೆ ಲಾಭವಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಉಳಿಸಿ ಬಲಪಡಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಹಾಗೂ ಎಲ್ಲಾ ವರ್ಗದ ಬಡವರ ನಂಬಿಕೆಯ ಪಕ್ಷವೇ ಕಾಂಗ್ರೆಸ್. ಕಾಂಗ್ರೆಸ್ ಇಲ್ಲದಿದ್ದರೆ ನಾವು ಯಾರೂ ಇಲ್ಲ ಎಂಬುದನ್ನು ಮನಗಾಣಬೇಕು ಎಂದ ಅವರು, ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಮಹತ್ವದ ನೆರವು ದೊರಕುತ್ತಿದೆ. ಹಿಂದೆ ಈ ಯೋಜನೆಗಳನ್ನು ವಿರೋಧಿಸಿದ್ದ ಬಿಜೆಪಿಯೇ ಈಗ ಬೇರೆ ರಾಜ್ಯಗಳಲ್ಲಿ ಅದೇ ಮಾದರಿಯನ್ನು ಅನುಸರಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಗೆ ಸಾಕ್ಷಿಯಾಗಿದೆ ಎಂದರು.

ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ಪಕ್ಷಕ್ಕೆ ಹಾನಿ ಉಂಟುಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಪಕ್ಷ ಇದ್ದರೆ ಮಾತ್ರ ಕಾರ್ಯಕರ್ತರಿಗೆ ಸ್ಥಾನಮಾನ ಹಾಗೂ ಅವಕಾಶಗಳು ದೊರೆಯುತ್ತವೆ ಎಂದು ಸಂಪಂಗಿ ಹೇಳಿದರು.

ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಪಕ್ಷ ಸಂಘಟನೆಗೆ ಶಿಸ್ತು, ಏಕತೆ ಹಾಗೂ ಸಮನ್ವಯ ಅತ್ಯಂತ ಅವಶ್ಯಕ. ಭಿನ್ನಾಭಿಪ್ರಾಯಗಳಿದ್ದರೆ ಅವುಗಳನ್ನು ಸಾರ್ವಜನಿಕವಾಗಿ ಚರ್ಚಿಸುವ ಬದಲು ಒಳಾಂಗಣವಾಗಿ ಪರಿಹರಿಸಿಕೊಳ್ಳಬೇಕು. ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಪರಸ್ಪರ ಸಹಕಾರ, ಸಹನೆ ಹಾಗೂ ತ್ಯಾಗದ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದಕ್ಕೆ ಸಾಧ್ಯ. ಮುರಳಿ ಮೋಹನ್ ಅವರು ಪ್ರಾಮಾಣಿಕ ಕಾರ್ಯಕರ್ತರಾಗಿದ್ದು, ಅವರ ಕೆಲಸ ಶೈಲಿ ಎಲ್ಲರಿಗೂ ಗೊತ್ತಿದೆ. ಮುಂದಿನ ಚುನಾವಣೆಯಲ್ಲಿ ಗೆಲುವಿಗೆ ಅಗತ್ಯ ತಂತ್ರ ರೂಪಿಸಿಕೊಂಡು, ಶಿಸ್ತಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಖಂಡಿತ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುರಳಿ ಮೋಹನ್ ಮಾತನಾಡಿ, 2008ರಿಂದ ಮೀಸಲಾತಿ ಕ್ಷೇತ್ರವಾಗಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಅನೇಕ ನಾಯಕರಿಗೆ ಅವಕಾಶ ನೀಡಿದೆ. ತಾವು 2018ರಿಂದಲೇ ಕ್ಷೇತ್ರದಲ್ಲಿ ಬೇರುಮಟ್ಟದಿಂದ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದು, ಈ ಶ್ರಮವನ್ನು ಗುರುತಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಯಿತು ಎಂದರು.

ಸೋಲಿನ ಬಳಿಕವೂ ನಿರಾಶರಾಗದೆ ಮತದಾರರ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಗುರಿಯೊಂದಿಗೆ ಶಕ್ತಿ ಮೀರಿ ಶ್ರಮಿಸುತ್ತಿರುವುದಾಗಿ ಹೇಳಿದರು.

2028ರಲ್ಲಿ ಟಿಕೆಟ್ ಸಿಕ್ಕರೂ ಸಿಕ್ಕದೇ ಇದ್ದರೂ ಪಕ್ಷವನ್ನು ಉಳಿಸಿ ಬಲಪಡಿಸುವ ಕೆಲಸ ಮುಂದುವರಿಸುತ್ತೇನೆ. ಆದರೆ, ಕೆಲವರು ಕಾರ್ಯಕರ್ತರು ಹಾಗೂ ಮುಖಂಡರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಪಕ್ಷದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಮುರಳಿ ಮೋಹನ್ ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಬಿ. ಶ್ರೀನಿವಾಸ್, ಸಕಲೇಶಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫಿಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರಮುಡಿ ಚಂದ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Congress candidate wins Lok Sabha elections, Congress in Hassan district This is a clear evidence of the party’s strength, says former MLA from the region’s Congress state. Vice President Sampangi said.