ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, 354ಎ ಅಡಿ ಪ್ರಕರಣವನ್ನು ನ್ಯಾಯಾಲಯ ಕೈ ಬಿಟ್ಟಿದೆ.
ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ದದ 354ಎ ಅಡಿ ದಾಖಲಾಗಿದ್ದ ಪ್ರಕರಣವನ್ನು ಕೈಬಿಟ್ಟು ಬೆಂಗಳೂರಿನ 42ನೇ ಎಸಿಜೆಎಂ ಜಡ್ಜ್ ಕೆ.ಎನ್. ಶಿವಕುಮಾರ್ ಆದೇಶಿಸಿದ್ದಾರೆ.
ಮಾಜಿ ಸಚಿವ ಎಚ್.ಡಿ ಲ.ರೇವಣ್ಣ ವಿರುದ್ದ ಮಹಿಳೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಎಚ್.ಡಿ ರೇವಣ್ಣ ಬಂಧಿತರಾಗಿದ್ದರು. ಎರಡು ಸೆಕ್ಷನ್ ಗಳಲ್ಲಿ ಹೈಕೋರ್ಟ್ ಒಂದು ಸೆಕ್ಷನ್ ರದ್ದು ಪಡಿಸಿತ್ತು. 354ಎ ಅಡಿಯ ಕೇಸ್ ಕಾಗ್ನಿಜೆನ್ಸ್ ಪಡೆಯಲು 42ನೇ ಎಸಿಜೆಎಂ ಕೋರ್ಟ್ ನಿರಾಕರಿಸಿದೆ.
Bengaluru: Former minister H.D. Revanna has got big relief in the case of sexual assault on a domestic worker, as the court has dropped the case under Section 354A.










