ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಬೀಸಲಿದೆ ಶೀತಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

Dense fog is likely to cover some areas of the capital city of Bengaluru in the morning.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ.

ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಇನ್ನಷ್ಟು ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ‌ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಮೈಸೂರು ದಾವಣಗೆರೆ ಶಿವಮೊಗ್ಗ ಹಾಸನ ಚಿಕ್ಕಮಂಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ.

ಭಾನುವಾರ ಉತ್ತರ ಒಳನಾಡಿನ ಬೀದರ್ ಜಿಲ್ಲೆಯಲ್ಲಿ 7.4 ಡಿಗ್ರಿ ಸೆಲ್ಸಿಯಸ್ ದಾಖಲು ಧಾರವಾಡದಲ್ಲಿ 9.5 ಡಿಗ್ರಿ ಸೆಲ್ಸಿಯಸ್ ದಾಖಲು ಹಾವೇರಿ ಮತ್ತು ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್ ದಾಖಲು ಬೆಳಗಾವಿಯಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯ ತಾಪಮಾನ ದಾಖಲು ಹಾಸನದಲ್ಲಿ 8.7 ಡಿಗ್ರಿ ಸೆಲ್ಸಿಯ ತಾಪಮಾನ ದಾಖಲು ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ 9 ಡಿಗ್ರಿ ತಾಪಮಾನ ದಾಖಲುರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Dense fog is likely to cover some areas of the capital city of Bengaluru in the morning.