ಹಾಸನ, ಜೂನ್ 24: ಜಿಲ್ಲೆಯಲ್ಲಿ ಸತತವಾಗಿ ಮುಂದುವರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳ ಅಂಗನವಾಡಿಗಳು ಹಾಗೂ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ (ಜೂನ್ 25) ರಜೆ ಘೋಷಿಸಿದ್ದಾರೆ.
ಈಗಾಗಲೇ ಸಕಲೇಶಪುರ ತಾಲ್ಲೂಕಿನ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳನ್ನೂ ಈ ಆದೇಶಕ್ಕೆ ಸೇರಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.










