ಚನ್ನರಾಯಪಟ್ಟಣ: ಐದು ವರ್ಷದೊಳಗಿನ ಎಲ್ಲಾ ಮಕ್ಕಳು ಪಲ್ಸ್ ಪೋಲಿಯೊ ಲಸಿಕೆಯಿಂದ ವಂಚಿತರಾಗದಂತೆ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಎಂದು ತೋಟಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ. ಶಂಕರಲಿಂಗೇಗೌಡ ಹೇಳಿದರು.
ತಾಲ್ಲೂಕಿನ ಹಿರೀಸಾವೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಡಿ.21ರ ಭಾನುವಾರ ಎಲ್ಲಾ ಕಡೆ ಲಸಿಕಾ ಬೂತ್ ಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಲಸಿಕೆ ಹಾಕಿಸಿ. ಮಾರನೆಯ ದಿನ ಲಸಿಕಾ ಸಿಬ್ಬಂದಿಗಳು ಮನೆ, ಮನೆಗೆ ಭೇಟಿ ನೀಡಿ, ಪ್ರತಿ ಮಗುವು ಲಸಿಕೆ ಹಾಕಿಸಿಕೊಂಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು, ಆ ಸಮಯದಲ್ಲಿ ಲಸಿಕೆಯಿಂದ ವಂಚಿತರಾಗಿದ್ದ ಮಗುವು ಪತ್ತೆಯಾದರೆ, ತಕ್ಷಣ ಲಸಿಕೆ ಹಾಕುವಂತೆ ಸೂಚಿಸಿದರು.
ಜುಟ್ಟನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ. ಭರತ್ ಮಾತನಾಡಿ, ಪೋಲಿಯೋ ಮುಕ್ತ ಭಾರತ ಅಗುವುದಕ್ಕೆ ಎಲ್ಲರೂ ಸಹಕಾರ ಅಗತ್ಯ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಎಂದರು.
ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕ ಶಂಕರೇಗೌಡ, ಆರೋಗ್ಯ ಕಾರ್ಯಕರ್ತೆಯರಾದ ಜಯಶೀಲ, ಶುಭಾ, ಕವಿತಾ, ನಂದಿನಿರವರುಗಳು ಪಲ್ಸ್ ಪೋಲಿಯೊ ಲಸಿಕೆ ಹಾಕುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು.
Dr. Shankaralingegowda, Director of Thoti Primary Health Center, said that staff should work to ensure that all children under the age of five are not deprived of the pulse polio vaccine.










