ಹಾಸನ: ಮೊಸಳೆಹೊಸಳ್ಳಿಯಲ್ಲಿ ಸಂಭವಿಸಿದ ಅವಘಡಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತರ ಮೇಲೆ ಲಾರಿ ಹರಿದು ಹತ್ತು ಜನರು ದುರ್ಮರಣಕ್ಕೀಡಾಗಿರುವುದು ಅತ್ಯಂತ ದು:ಖದ ವಿಷಯ. ಇದೇ ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವುದು ದಿಗ್ಭ್ರಮೆ ಮೂಡಿಸಿದೆ.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ತಮ್ಮ ಕುಟುಂಬದವರನ್ನು ಕಳೆದುಕೊಂಡ ಕುಟುಂಬ ವರ್ಗ ಹಾಗೂ ಬಂಧು ಮಿತ್ರರಿಗೆ ದು:ಖ ಭರಿಸುವ ಶಕ್ತಿಯನ್ನು ನೀಡಲೆಂದು ಆಶಿಸುತ್ತಾ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.










