ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅ.೧೮ ರಂದು ಅರಸೀಕೆರೆಯಲ್ಲಿ ಕಾರ್ಯಕ್ರಮ: ಕೃಷ್ಣೇಗೌಡ ಹೇಳಿಕೆ

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ

ಅರಸೀಕೆರೆ ತಾಲೂಕು ಸಂಘದ ಅಧ್ಯಕ್ಷ ಅಶೋಕ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಾನಂದ ನಾಯಕ, ಪದಾಧಿಕಾರಿಗಳಾದ ಶಿವಸ್ವಾಮಿ, ಪ್ರಭು, ಗೋವಿಂದಬಾಬು ಇದ್ದರು.

ಹಾಸನ: ಜಿಲ್ಲಾ ಕಾರ್ಯಕಾರಿ ಸಮಿತಿ ನಿರ್ಧಾರದಂತೆ ಹಾಸನ
ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅ.೧೮ ರಂದು ಅರಸೀಕೆರೆಯ ಕಸ್ತೂರಬಾ ಗಾಂಧಿ ರಾಷ್ಟಿçÃಯ ಸ್ಮಾರಕ ಟ್ರಸ್ಟ್ ಆಡಿಟೋರಿಯಂನಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ ೧೦:೩೦ ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಉದ್ಘಾಟನೆ ನೆರವೇರಿಸುವರು ಎಂದರು. ಸ್ಥಳೀಯ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರತಿಭಾ ಪುರಸ್ಕಾರ ನಡೆಸಿಕೊಡುವರು. ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಜರಿರುವರು ಎಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಸತ್ಯಭಾಮ ಸಿ., ಎಸ್ಪಿ ಮೊಹಮ್ಮದ್ ಸುಜಿತಾ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಸೇರಿ ಎಲ್ಲಾ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಎಲ್ಲಾ ಎಂಟು ತಾಲೂಕುಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಬರುವಾಗ ಕಡ್ಡಾಯವಾಗಿ ವಿದ್ಯಾರ್ಥಿಯ ಅಂಕಪಟ್ಟಿ ಹಾಗೂ ಒಂದು ಗುರುತಿನ ಚೀಟಿ ತರುವಂತೆ ಅವರು ಸೂಚನೆ ನೀಡಿದರು.
೨೦೨೨-೨೩ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕಾ ಪ್ರಕಟಣೆ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಜಿಲ್ಲೆಯ ಎಲ್ಲಾ ಎಂಟು ತಾಲ್ಲೂಕುಗಳಿಂದ ಒಟ್ಟು ಎಸ್.ಎಸ್.ಎಲ್.ಸಿ.ಯ ೨೦೬ ಮತ್ತು ಪಿ.ಯು.ಸಿ ಯ ೧೭೫ ಸೇರಿ ಒಟ್ಟು ೩೮೧ ಪ್ರತಿಭಾನ್ವಿತ ವಿದ್ಯಾರ್ಥಿ ಗಳನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಮತ್ತು ಜಿಲ್ಲಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಮಾಡಲಾಗಿದೆ ಎಂದು ಅವರು ಹೇಳಿದರು. ಅರಸೀಕೆರೆ ತಾಲೂಕು ಸಂಘದ ಅಧ್ಯಕ್ಷ ಅಶೋಕ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಾನಂದ ನಾಯಕ, ಪದಾಧಿಕಾರಿಗಳಾದ ಶಿವಸ್ವಾಮಿ, ಪ್ರಭು, ಗೋವಿಂದಬಾಬು ಇದ್ದರು.