ಹಾಸನ: ಬೂವನಹಳ್ಳಿ ಗ್ರಾಮದಲ್ಲಿ ವಿವಿಧ ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಇಂದು ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರ ದೂರು-ದುಮ್ಮಾನ ಆಲಿಸಿದರು.
ಈ ವೇಳೆ ಗ್ರಾಮದಲ್ಲಿ ಪ್ರಮುಖವಾಗಿ ಸ್ಮಶಾನ ಜಾಗಕ್ಕೆ ತೊಂದರೆಯಾಗಿದ್ದ ಹಿನ್ನೆಲೆಯಲ್ಲಿ ಜಾಗ ಗುರುತು ಮಾಡಿ ಸ್ಮಶಾನಕ್ಕೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದರು.
ಬಳಿಕ ಸುರಕ್ಷತಾ ಹಿತ ದೃಷ್ಟಿಯಿಂದ ಬೂವನಹಳ್ಳಿ ಕೆರೆ ಬದಿಗೆ ತಡೆಗೋಡೆ ನಿರ್ಮಾಣ ಮಾಡಲು ತೀರ್ಮಾನ ಕೈಗೊಂಡು ಆದಷ್ಟು ಬೇಗ ಕಾಮಗಾರಿ ಮುಗಿಸಿ ಕೊಡಲಾಗುವುದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಸ್ವಾಮಿಗೌಡ, ಬೂವನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಆರ್.ಬೊಮ್ಮೇಗೌಡ, ನಿರ್ದೇಶಕ ರವಿಕುಮಾರ್, ಹಿರಿಯ ಮುಖಂಡರಾದ ಮಲ್ಲೇಶ್, ತುಳಸಿರಾಂ ಮೊದಲಾದವರಿದ್ದರು.










