ಚನ್ನರಾಯಪಟ್ಟಣ: ದಿಡಗ ಭಾಗದ ರೈತರ ಹತ್ತಾರು ವರ್ಷಗಳ ಕನಸಾಗಿದ್ದ ಏತ ನೀರಾವರಿ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ 74 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ನನಸು ಮಾಡಿದೆ ಎಂದು ಮಾಜಿ ವಿಧಾನ ಪರಿಷತ್ ಶಾಸಕ ಎಂಎ ಗೋಪಾಲಸ್ವಾಮಿ ಹೇಳಿದರು.
ತಾಲೂಕಿನ ಕೆ. ವಡ್ಡರಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ದಿಡಗ ಭಾಗದ ರೈತರು ದಿಡಗ ಮತ್ತು ದಿಡಗ ತುಮಕೂರು ಗ್ರಾಮದ ಕೆರೆ ತುಂಬಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದರು ತಾವು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಈ ಭಾಗದ ರೈತರೊಂದಿಗೆ ತೆರಳಿ ಮನವಿ ಮಾಡಲಾಗಿತ್ತು ಇದಕ್ಕೆ ಸರ್ಕಾರ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ರೈತರ ಹತ್ತಾರು ವರ್ಷಗಳ ಕನಸು ನನಸು :
ಅನೇಕ ವರ್ಷಗಳಿಂದ ಈ ಭಾಗದಲ್ಲಿ ಕೆರೆಗಳು ತುಂಬದೇ ರೈತರು ಸಮಸ್ಯೆ ಎದುರಿಸುತ್ತಿದ್ದರು ಈ ಭಾಗದ ಜನ ಜಾನುವಾರುಗಳಿಗೆ ಹಕ್ಕಿ ಪಕ್ಷಿಗಳಿಗೂ ಕೂಡ ಕುಡಿಯುವ ನೀರಿಗೂ ಸಮಸ್ಯೆಯಾಗಿತ್ತು ನಾಗಮಂಗಲ ಭಾಗದ ಹೇಮಾವತಿ ನಾಲೆಯಿಂದ ಏತ ನೀರಾವರಿ ಯೋಜನೆ ಮೂಲಕ ಈ ಭಾಗದ ಕೆರೆಗಳನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕೆ ವಡ್ಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನಕ್ಕೆ ನಾನು ಸುಮಾರು 07 ಲಕ್ಷ ಹಣ ನೀಡಿದ್ದೇನೆ ನನ್ನ ವಿಧಾನಪರಿಷತ್ ಸದಸ್ಯರ ಅವಧಿಯಲ್ಲಿ ಜಿಲ್ಲೆಯ ಹಾಗೂ ತಾಲೂಕಿನ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಶ್ರಮವಹಿಸಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಡ್ಡರಹಳ್ಳಿ ಮೋಹನ್, ನಟೇಶ್, ಪ್ರಮೋದ್, ವಿಹೆಚ್ ರಮೇಶ್, ವಿಎನ್ ಬೋರೇಗೌಡ, ವಿ.ಹೆಚ್ ಹನುಮಂತೇಗೌಡ, ಸೇರಿದಂತೆ ಇತರರು ಹಾಜರಿದ್ದರು.
Former Legislative Council MLA MA Gopalaswamy said that the state Congress government has made a promise to release Rs 74 crore for the lift irrigation project, which has been a dream of farmers in the Diga region for decades.










