ಹಾಸನ:ನಾಡಪ್ರಭು ಕೆಂಪೇಗೌಡ ಜಯಂತಿಗೆ ಆಹ್ವಾನ- ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಹೆಚ್‌.ಎಂ. ವಿಶ್ವನಾಥ್

Former MLA H.M. Vishwanath met Deputy Chief Minister D.K. Shivakumar in Bengaluru on Saturday and requested him to participate in the Nadaprabhu Kempegowda Jayanti program to be held in Sakleshpur town on February 2.

ಹಾಸನ: ಮಾಜಿ ಶಾಸಕ ಹೆಚ್‌.ಎಂ.ವಿಶ್ವನಾಥ್‌ ಅವರು ಬೆಂಗಳೂರಿನಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಫೆಬ್ರವರಿ 2 ರಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿಯಲ್ಲಿ ಭಾಗವಹಿಸುವಂತೆ ಕೋರಿದರು.

ಆಹ್ವಾನ ಸ್ವಾಗತಿಸಿದ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಹೆಚ್‌.ಎಂ.ವಿಶ್ವನಾಥ್‌ ಅವರು, ಮಲೆನಾಡು ಭಾಗದಲ್ಲಿ ಕಾಡುತ್ತಿರುವ ಕಾಡಾನೆಗಳ ಸಮಸ್ಯೆ ನಿವಾರಣೆಗೆ ಶ್ರೀಲಂಕಾ ಮಾದರಿಯಲ್ಲಿ ಆನೆಧಾಮ ನಿರ್ಮಾಣಕ್ಕೆ ಮುಂದಾಗಬೇಕೆಂದು ಕೋರಿದರು.

ಈ ವಿಚಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಮುಖ್ಯಮಂತ್ರಿ, ಅಂದು ಕಾಡಾನೆ ಸಮಸ್ಯೆ, ಆನೆಧಾಮ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಶ್ವನಾಥ್‌ ಅವರು ತಿಳಿಸಿದ್ದಾರೆ. ಸಕಲೇಶಪುರ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷ ಬೈರಮುಡಿ ಚಂದ್ರು ಮತ್ತಿತರರು ಹಾಜರಿದ್ದರು.