ಹಾಸನ:ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮನೆಗೆ ವಾಪಸ್

Former Prime Minister and JDS party president H.D. Deve Gowda, who was admitted to Manipal Hospital in Bengaluru for treatment, has recovered and returned home today.

ಹಾಸನ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ  ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.

ವೈದ್ಯರ ಸೂಚನೆಯಂತೆ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ದಯವಿಟ್ಟು ತೆರಳಬೇಡಿ ಎಂದು ಮನವಿ ಮಾಡಲಾಗಿದೆ.

ದೇವೇಗೌಡರು ವಿಶ್ರಾಂತಿ ಬಳಿಕ, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಖುದ್ದು ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ತಿಳಿಸಿದ್ದಾರೆ. ಅತಿಯಾದ ಜ್ವರ ಹಾಗೂ ಮೂತ್ರಸೋಂಕಿನಿಂದ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಒಂದು ವಾರಕ್ಕೂ ಹೆಚ್ಚು ದಿನ ಚಿಕಿತ್ಸೆ ಪಡೆದಿದ್ದಾರೆ.