ಹಾಸನ: ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಇಂದು ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವಘಡಕ್ಕೆ ಸಂಬಂಧಪಟ್ಟಂತೆ ಸ್ಥಳೀಯರು ಹಾಗೂ ಪೊಲೀಸರಿಂದ ಮಾಹಿತಿ ಪಡೆದ ದೇವೇಗೌಡರು, ಬಳಿಕ ಘಟನೆಯಲ್ಲಿ ಮೃತಪಟ್ಟವರ ಮನೆಗಳಿಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.










